Friday 31 October 2014

A function to express  happiness for receiving the best blog award for U.P section  in Kumbla Sub-district was arranged in the school on 31-10-14 .Enmakaje Grama Pachayath education standing committee chairman BS Gambhir, PTA President Lokanath shetty, School Manager K.Krishna Bhat expressed happiness for the occasion Headmaster Shripathi Bhat spoke few words about the blog
Mr B S Gambhir in the presence of parents, teachers and students handed over the prize to Gopala krishna Bhat,the school teacher . The function was arranged by the students.

Thursday 30 October 2014


Born: October 31, 1875
Died: December 15, 1950
Achievements: Successfully led Kheda Satyagraha and Bardoli revolt against British government; elected Ahmedabad's municipal president in 1922, 1924 and 1927; elected Congress President in 1931; was independent India's first Deputy Prime Minister and Home Minister; played a key role in political integration of India; conferred Bharat Ratna in 1991. Sardar Patel was popularly known as Iron Man of India. His full name was Vallabhbhai Patel. He played a leading role in the Indian freedom struggle and became the first Deputy Prime Minister and Home Minister of India. He is credited with achieving political integration of India.

Tuesday 28 October 2014

ತರಕಾರಿ ಸ್ವಾವಲಂಬನೆ ' ಎಂಬ ಉದ್ದೇಶದೊಂದಿಗೆ ಶಾಲಾ ತರಕಾರಿ ತೋಟದ ನಿರ್ಮಾಣ ಕೆಲಸಗಳು ಅಧ್ಯಾಪಕ ಹಾಗೂ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಶಾಲಾ ಪರಿಸರದಲ್ಲಿ ನಡೆಯುತ್ತಿವೆ .

Friday 24 October 2014

         ಶಾಲಾ ಮಟ್ಟದ ಕಲೋತ್ಸವವನ್ನು 24-10-2014 ಶುಕ್ರವಾರ ನಡೆಸಲಾಯಿತು   . ಮಕ್ಕಳು ಆಸಕ್ತಿಯಿಂದ ವಿವಿಧ           ಸ್ಪರ್ಧೆಗಳಲ್ಲಿ ಭಾಗವಹಿಸಿದರು .

Tuesday 21 October 2014

ಮಕ್ಕಳಿಂದ ಸಾಬೂನು ತಯಾರಿ 
                              

ದೀಪಾವಳಿ  ಆಚರಣೆಯ ಮಹತ್ವ

  ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
  • ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
  • ಅಮಾವಾಸ್ಯೆಯ ಹಿಂದಿನ ದಿನ (ಚತುರ್ದಶಿ) ಶ್ರೀ ಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ
  •   .ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ      ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
  • ದೀಪಾವಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತುರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
  •  ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದ
  • ತಮಸೋಮಾ ಜ್ಯೋತಿರ್ಗಮಯ .      ಚಿಣ್ಣರ ಮನದ ದೀಪ ಪ್ರಜ್ವಲಿಸಲಿ. 

Thursday 16 October 2014

The 2014 Theme is:Family Farming: Feeding the World, Caring for the Earth

World Food Day is celebrated every year around the world on 16 October in honor of the date of the founding of the Food and Agriculture Organization of the United Nations in 1945. The day is celebrated widely by many other organisations concerned with food security, including the World Food Programme and the International Fund for Agricultural Development.The World Food Day theme for 2014 is Family Farming: “Feeding the world, caring for the earth”World Food Day is a day of action against hunger. On October 16, people around the world come together to declare their commitment to eradicate hunger in our lifetime. 

Saturday 11 October 2014

ಕೈಲಾಸ್ ಸತ್ಯಾರ್ಥಿ(ಜನನ 11 ಜನವರಿ 1954) ಮಕ್ಕಳ ಹಕ್ಕುಗಳ ಹೋರಾಟಗಾರ ಮತ್ತು 2014 ರ ಸಾಲಿನ ನೋಬೆಲ್ ಶಾಂತಿ ಪ್ರಶಸ್ತಿ ವಿಜೇತರು. ಇವರು ಭಾರತದಲ್ಲಿ "ಬಚ್‍ಪನ್ ಬಚಾವೋ ಆಂದೋ"ದ ಮೂಲಕ ಸುಮಾರು 80 ಸಾವಿರ ಮಕ್ಕಳ ಬದುಕನ್ನು ಉತ್ತಮಗೊಳಿಸಲು ಪ್ರಯತ್ನಿಸಿದ್ದಾರೆ.ಇವರ ಈ ಕೆಲಸವನ್ನು ಗಮನಿಸಿ 2014ರ ನೋಬೆಲ್ ಶಾಂತಿ ಪ್ರಶಸ್ತಿಯನ್ನು ಪಾಕಿಸ್ತಾನ ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಮಲಾಲ ಯೂಸಫ್ ಝಾಯಿ ಇವರೊ೦ದಿಗೆ ನೀಡಲಾಗಿದೆ.

Thursday 9 October 2014

ಕಾರ೦ತರಿಗೊ೦ದು ನಮನ..ಜನ್ಮದಿನ   10-10-1907
ಜ್ಞಾನಪೀಠ ಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ 1907 ಅಕ್ಟೋಬರ್ 1೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ ಕಮ್ಮಿಯಾಗಿ ಬಾಳಿ, ಅರ್ಥಪೂರ್ಣ ಬದುಕು ಕಳೆದ ಸಾಹಿತ್ಯ ದಿಗ್ಗಜ ಡಾ. ಶಿವರಾಮಕಾರಂತರು ೧೯೯೭, ಡಿಸೆಂಬರ್ ೦೯ ರಂದು ನಿಧನ ಹೊಂದಿದರು. ತಮ್ಮ ಜೀವಿತಾವಧಿಯಲ್ಲಿ ಸುಮಾರು ೪೨೭ ಪುಸ್ತಕಗಳನ್ನು ರಚಿಸಿದರು. ಅವುಗಳಲ್ಲಿ ಕಾದಂಬರಿಗಳು ೪೭. ತಮ್ಮ ೯೬ನೆಯ ವಯಸ್ಸಿನಲ್ಲೂ ಹಕ್ಕಿಗಳ ಕುರಿತು ಒಂದು ಪುಸ್ತಕವನ್ನು ಬರೆದಿದ್ದು, ಇದು ವಿಶ್ವ ದಾಖಲೆಗೆ ಅರ್ಹವಾಗಿರುವ ಒಂದು ಸಾಧನೆ ಎನ್ನಬಹುದು. ಸಾಹಿತಿಯಾಗಿ ಶಿವರಾಮ ಕಾರಂತರು ಪ್ರಸಿದ್ಧಿಯಾಗಿರುವಂತೆ, ಇತರ ಕ್ಷೇತ್ರಗಳಲ್ಲೂ ಅಪಾರ ಸಾಧನೆ ಮಾಡಿದವರು. ಕರ್ನಾಟಕದ ಪ್ರಮುಖ ಕಲೆಯಾದ ಯಕ್ಷಗಾನದ ಉಳಿವಿಗೆ ಪ್ರಯತ್ನಿಸಿ, ಅದರಲ್ಲಿ ಹಲವು ಪ್ರಯೋಗಗಳನ್ನು ಮಾಡಿದ್ದರು. ತಾವೇ ಸ್ವತಃ ನೃತ್ಯವನ್ನು ಕಲಿತು, ಬ್ಯಾಲೆಯಲ್ಲೂ ಗಂಭೀರ ಪ್ರಯೋಗ ಮತ್ತು ಪ್ರಯತ್ನ ಮಾಡಿದ್ದರು. ಯುವಕರಾಗಿದ್ದಾಗ, ಸಮಾಜ ಸುಧಾರಣೆಗೂ ಕೈ ಹಾಕಿ, ವೇಶ್ಯಾ ವಿವಾಹಗಳನ್ನು ಮಾಡಿಸಿದ್ದರು! ಯಕ್ಷಗಾನ ತಂಡಗಳನ್ನು ಕಟ್ಟಿಕೊಂಡು ದೇಶ ವಿದೇಶಗಳಲ್ಲಿ ಈ ಕಲೆಯನ್ನು ಪ್ರಚುರಪಡಿಸಲು ಯತ್ನಿಸಿದರು. ಮಕ್ಕಳಲ್ಲಿದ್ದ ಪ್ರತಿಭೆ ಅರಳಿಸಲು ಪುತ್ತೂರಿನಲ್ಲಿ ಬಾಲವನ ಎಂಬ  ಶೈಕ್ಷಣಿಕ ಕೇಂದ್ರವನ್ನು ತೆರೆದಿದ್ದರು. ಪುತ್ತೂರಿನಲ್ಲಿ ಒಂದು ಮುದ್ರಣಾಲಯ ತೆರೆದು, ತಮ್ಮ ಪುಸ್ತಕಗಳನ್ನು ಮುದ್ರಿಸುತ್ತಿದ್ದರಲ್ಲದೆ, ತಮ್ಮ ಹಲವು ಕಾದಂಬರಿಗಳಿಗೆ ತಾವೆ ಮುಖಪುಟದ ಚಿತ್ರಗಳನ್ನೂ ಬರೆದು ಮುದ್ರಿಸಿದ ಬಹುಮುಖ ಪ್ರತಿಭೆ ಇವರದ್ದು! ಬಹುಶಃ ಮುಖಪುಟ ಚಿತ್ರ ಬರೆದು ಪ್ರಕಟಿಸಿದ ಕನ್ನಡದ ಪ್ರಥಮ ಪ್ರಮುಖ ಸಾಹಿತಿ ಇವರೊಬ್ಬರೇ. ನಿರಂತರ ಪ್ರಯೋಗಶೀಲರಾಗಿದ್ದ ಕೋಟ ಶಿವರಾಮ ಕಾರಂತ ಅವರು ಕನ್ನಡ ಚಿತ್ರರಂಗದಲ್ಲಿ ಕೂಡ ತಮ್ಮ ಪ್ರಯೋಗವನ್ನು ಆರಂಭ ಮಾಡಿದ್ದು. ಮೂಕಿ ಚಿತ್ರ ನಿರ್ಮಾಣಕ್ಕೆ ಕೈಹಾಕುವ ಮೂಲಕ. ಹರಿಜನರ ಬದುಕನ್ನು ಆಧರಿಸಿದ್ದ ಚಿತ್ರವನ್ನು ತಾವೇ ಚಿತ್ರೀಕರಿಸಿ, ಅಭಿನಯಿಸಿ ನಿರ್ದೇಶಿಸಿದ್ದರು. ಅನಂತರ ಭೂತರಾಜ್ಯ (೧೯೩೧) ಎಂಬ ಮೂಕಿ ಚಿತ್ರಗಳನ್ನು ಸಹ ನಿರ್ಮಿಸಿದರು. ಪರಿಸರ ಹೋರಾಟ: ಕಾರಂತರ ಕಾದಂಬರಿಗಳುದ್ದಕ್ಕೂ ಪರಿಸರದ ಚಿತ್ರಣ ಗಾಢವಾಗಿದೆ. ನಿಜ ಜೀವನದಲ್ಲೂ ಪರಿಸರದ ಉಳಿವಿಗೆ ಹೋರಾಡಿದ ಕಾರಂತರು, ಕೈಗಾ ಅಣುವಿದ್ಯುತ್ ಸ್ಥಾವರದ ವಿರುದ್ಧ ಹೋರಾಟಕ್ಕೆ ನಾಯಕತ್ವ ವಹಿಸಿದ್ದು ಪ್ರಖ್ಯಾತವಾಗಿದೆ. ಮಕ್ಕಳಿಂದ, ವಯೋವೃದ್ಧರವರೆಗೆ ಸಾಹಿತ್ಯ ಕೃಷಿ ಮಾಡಿದ, ಚಿಂತಿಸಿದ ಕಾರಂತರು ಇಡೀ ದೇಶದ ದೊಡ್ಡ ನಿಧಿಯಾಗಿದ್ದರು. ಕರ್ನಾಟಕದ ಮೂಲೆ ಮೂಲೆ, ಭಾರತದ ಬಹುತೇಕ ಸ್ಥಳಗಳು, ವಿದೇಶಗಳ ಸಾಂಸ್ಕೃತಿಕ ಕೇಂದ್ರಗಳಿಗೆ ಸುತ್ತುತ್ತ, ತಮ್ಮ ಕೊನೆಗಾಲ ದವರೆಗೂ ಪ್ರವಾಸ ಮಾಡಿದ್ದರು.ಜ್ಞಾನಪೀಠಪದ್ಮಭೂಷಣಪಂಪ ಪ್ರಶಸ್ತಿನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ. ವಯಸ್ಸಿನ ದಣಿವು ಮರೆತು, ಜ್ಞಾನದಾರಿಯಲ್ಲಿ ಜನರನ್ನು ಕೊಂಡೊಯ್ದ ಪ್ರೀತಿಯ "ಕಾರಂತಜ್ಜ" ಆಗಿದ್ದರು. ವಿಶ್ವ ಪ್ರೇಮಿ ಹಾಗೂ ಮಹಾ ಮಾನವತಾವಾದಿ ಆಗಿದ್ದ ಕಾರಂತರು ಜ್ಞಾನ ಕ್ಷಿತಿಜವನ್ನು ಎಂಟು ದಿಕ್ಕಿಗೆ ಚಾಚಿದ ಅಕ್ಷರ ಪ್ರೇಮಿಯಾಗಿದ್ದರು.

Sunday 5 October 2014

ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಭಾರತವೂ ಸೇರಿದಂತೆ ವಿಶ್ವದ್ಯಾಂತ ಮುಸ್ಲಿಮರು ಈ 
ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸುತ್ತಾರೆ.ಪ್ರವಾದಿಗಳಲ್ಲೊಬ್ಬರಾದ ಪ್ರವಾದಿ ಇಬ್ರಾಹಿಮರು 
ತಮ್ಮಮಗನಾದ ಇಸ್ಮಾಯಿಲ್‌ರನ್ನುಸೃಷ್ಟಿಕರ್ತ ಅಲ್ಲಾಹನಿಗೆಬಲಿ ಕೊಡಲುಮುಂದಾದ ದಿನವನ್ನು ಈದ್ಉಲ್ಅದಾ ಅರ್ಥಾತ್ ಬಕ್ರೀದ್ ಎನ್ನಲಾಗುತ್ತದೆ. ಈ ಹಬ್ಬದ ದಿವಸ ಮುಸ್ಲಿಮರು ರ೦ಜಾನ್ ಹಬ್ಬದ ಹಾಗೆಯೇ  ಪ್ರಾರ್ಥನೆ ಇತ್ಯಾದಿಗಳನ್ನು ಸಲ್ಲಿಸುತ್ತಾರೆ. ಒಟ್ಟಿನಲ್ಲಿ ಹಬ್ಬಗಳ ಆಚರಣೆಯಲ್ಲಿ ಒ೦ದು ಬಗೆಯ ವೈಶಿಷ್ಟ್ಯವಿದೆ. ಅವು ಆ ಜನರಲ್ಲಿ ಒ೦ದು ಬಗೆಯ ಚೈತನ್ಯವನ್ನೂ, ಸೋದರ ಭಾವನೆಯನ್ನೂ ಉ೦ಟು ಮಾಡುತ್ತದೆ.  ನಮಾಜ್ ನ೦ತರ ಒಬ್ಬರನೊಬ್ಬರು ಆಲಿ೦ಗನ ಮಾಡಿಕೊಳ್ಳುವುದು, ಕೈ ಕುಲುಕುವುದು, "ಈದ್ ಮುಬಾರಕ್" ಅ೦ದರೆ "ಈ ಹಬ್ಬ ನಿಮಗೆ ಶುಭವನ್ನು೦ಟು ಮಾಡಲಿ" ಎನ್ನುವುದು ಗಮನಾರ್ಹ.ಈ ಹಬ್ಬಗಳಲ್ಲಿ ಎಲ್ಲರಿಗೂ ಎಲ್ಲಾ ಮನೆಗಳಲ್ಲೂ ಆಮ೦ತ್ರಣ. ಸ್ವಲ್ಪವಾದರೂ ತಿನ್ನಲೇಬೇಕು. ಉಕ್ಕಿ ಬರುವ ಆನ೦ದವನ್ನು ಎಲ್ಲರೂ ಹ೦ಚಿಕೊಳ್ಳಬೇಕು.ಹಬ್ಬದ ದಿನ ಆನ೦ದ ಪಡೆಯದವನು ಅಭಾಗ್ಯನೆ೦ದು ಹೇಳಿಕೊಳ್ಳುವುದು ಮುಸ್ಲಿಮರ ಒ೦ದು ವಾಡಿಕೆ.

Saturday 4 October 2014

       
   ಶಾಲೆಯಲ್ಲಿ  ವಿದ್ಯಾರಂಭ  ಹಾಗೂ ಶಾರದ  ಪೂಜಾ  ಕಾರ್ಯಕ್ರಮ  ದಿನಾಂಕ  ೪-೧೦-೨ಶನಿವಾರ ನಡೆಯಿತು

Friday 3 October 2014






ಯಾ ಕುಂದೇಂದು ತುಷಾರಹಾರಧವಲಾ ಯಾ ಶುಭ್ರವಸ್ತ್ರಾವೃತಾ
ಯಾ ವೀಣಾವರದಂಡಮಂಡಿತಕರಾ ಯಾ ಶ್ವೇತಪದ್ಮಾಸನಾ  I
ಯಾ ಬ್ರಹ್ಮಾಚ್ಯುತಶಂಕರಪ್ರಭೃತಿಭಿರ್ದೇವೈಸ್ಸದಾ ಪೂಜಿತಾ 
ಸಾ ಮಾಂ ಪಾತು ಸರಸ್ವತೀ ಭಗವತೀ ನಿಶ್ಶೇಷಜಾಡ್ಯಾಪ
ಹಾ .I 

Thursday 2 October 2014

                                                         ಗಾಂಧಿ ಜಯಂತಿ ಆಚರಣೆ
                                                   
                                                      ನಡೆಯಿತು ಇಂದು ಗಾಂಧಿ ಜಯಂತಿ
                                                      ರಾಷ್ಟ್ರ ನಾಯಕಗೆ ನಮಿಸುತ್ತ .
                                                      ಏರಿತು ದ್ವಜವು ಮೊಳಗಿತು ಗೀತೆ
                                                      ನುಡಿಯುತ  ಶಪಥವ  ಒಗ್ಗೂಡುತ .
                                                      ನುಡಿದರು ಶುಚಿತ್ವದ  ಮಹತ್ವವನು
                                                      ಎಮ್ಮಯ ಶಾಲೆಯ ಪ್ರಭಂದಕರು .
                                                      ಪಡೆದರು ವಿಧ ವಿಧ ಮಾನ್ಯಗಳ
                                                      ಬಹುಮುಖ ಸ್ಪರ್ಧೆಯ ಸ್ಪರ್ಧಿಗಳು.
                                                      ನಡೆಯಿತು ಸ್ವಚ್ಚತ ಅಭಿಯಾನ
                                                      ಗಾಂಧಿಯ ಹೆಸರಲಿ ಶ್ರಮದಾನ .

Wednesday 1 October 2014

AN EYE FOR AN EYE ONLY ENDS UP MAKING
THE WHOLE WORLD BLIND