Tuesday 21 October 2014

ದೀಪಾವಳಿ  ಆಚರಣೆಯ ಮಹತ್ವ

  ಎರಡು ಪೌರಾಣಿಕ ಘಟನೆಗಳು ಮುಖ್ಯವಾಗಿ ದೀಪಾವಳಿಯೊಂದಿಗೆ ಸಂಬಂಧಿತವಾಗಿವೆ:
  • ಶ್ರೀ ರಾಮ ರಾವಣನನ್ನು ಗೆದ್ದು ಸೀತೆ ಮತ್ತು ಲಕ್ಷ್ಮಣರೊಂದಿಗೆ ಅಯೋಧ್ಯೆಗೆ ಮರಳಿದ ಸಮಯವೆಂದು ದೀಪಾವಳಿಯನ್ನು ಕೆಲವರು ಆಚರಿಸುತ್ತಾರೆ
  • ಅಮಾವಾಸ್ಯೆಯ ಹಿಂದಿನ ದಿನ (ಚತುರ್ದಶಿ) ಶ್ರೀ ಕೃಷ್ಣ ನರಕಾಸುರನನ್ನು ಸಂಹರಿಸಿದ ದಿನ ಎಂದು ಹೇಳಲಾಗುತ್ತದೆ
  •   .ಸಿಕ್ಖ್ ಧರ್ಮದಲ್ಲಿಯೂ ದೀಪಾವಳಿ ಮುಖ್ಯ ಹಬ್ಬ. ೧೬೨೦ ರಲ್ಲಿ ಸಿಕ್ಖರ ಆರನೆಯ ಗುರು ಹರಗೋಬಿಂದ್ ಸಿಂಗ್ ಗ್ವಾಲಿಯರ್‌ನ ಕೋಟೆಯಲ್ಲಿ      ಬಂಧಿತರಾಗಿದ್ದ ೫೨ ರಾಜರನ್ನು ಬಿಡಿಸಿ ತಂದ ದಿನವೆಂದು ಈ ಕಾಲವನ್ನು ಆಚರಿಸಲಾಗುತ್ತದೆ.
  • ದೀಪಾವಯು ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತುರ್ದಶಿಯಂದು (ಕ್ರಿ.ಪೂ ೫೨೭ ಅಕ್ಟೋಬರ್ ೧೫) ಪಾವಾಪುರಿಯಲ್ಲಿ ಮೋಕ್ಷ ಹೊಂದಿದ ದಿನವಾಗಿ ಆಚರಿಸಲ್ಪಡುತ್ತದೆ.
  •  ಬಲಿ-ವಾಮನರ ಕಥೆ ಮತ್ತು ಬಲಿಯ ತ್ಯಾಗವನ್ನು ಅಮಾವಾಸ್ಯೆಯ ಮರು ದಿನ ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತದ
  • ತಮಸೋಮಾ ಜ್ಯೋತಿರ್ಗಮಯ .      ಚಿಣ್ಣರ ಮನದ ದೀಪ ಪ್ರಜ್ವಲಿಸಲಿ. 

No comments:

Post a Comment