Friday 7 November 2014

  • 'ಡಾ.ಸರ್.ಸಿ.ವಿ.ರಾಮನ್',ಎಂದೇ ತಮ್ಮ ಆಪ್ತಗೆಳೆಯರು ಹಾಗೂ ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ,'ಚಂದ್ರಶೇಖರ ವೆಂಕಟರಾಮನ್ ರವರು, ನೋಬೆಲ್ ಪ್ರಶಸ್ತಿ ಗಳಿಸಿದ, ಪ್ರಪ್ರಥಮ ಭಾರತೀಯ ವಿಜ್ಞಾನಿ.ಈ ಪ್ರಶಸ್ತಿಯನ್ನು1930 ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು
  • 1907ರಲ್ಲಿ 'ಭಾರತೀಯ ಸಿವಿಲ್ ಸರ್ವಿಸ್ ಪರೀಕ್ಷೆ'ಯಲ್ಲಿ ಉತ್ತೀರ್ಣರಾಗಿ 'ಕಲ್ಕತ್ತೆ'ಯಲ್ಲಿ 'ಡೆಪ್ಯುಟಿ ಅಕೌಂಟೆಂಟ್ ಜನರಲ್' ಆಗಿ ವೃತ್ತಿ-ಜೀವನ ಆರಂಭಿಸಿದರು, ವಿದ್ಯಾರ್ಥಿಯಾಗಿದ್ದಾಗ ವೈಜ್ಞಾನಿಕ ಪ್ರಯೋಗಗಳಲ್ಲಿ ತೋರುತ್ತಿದ್ದ ಆಸಕ್ತಿಯನ್ನು ಅವರು ವೃತ್ತಿನಿರತರಾಗಿದ್ದಾಗಲೂ ಮುಂದುವರಿಸಿದರು.
  • 1917ರಲ್ಲಿ 'ಕಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರದ ಪ್ರಾಚಾರ್ಯ'ರಾದರು.
  • 1924ರಲ್ಲಿ 'ಲಂಡನಿನ ಫೆಲೊ ಆಫ್ ರಾಯಲ್ ಸೊಸೈಟಿ'ಗೆ ರಾಮನ್ ಆಯ್ಕೆಯಾದರು.
  • ಮಾರ್ಚ್ 16  1928ರಲ್ಲಿ ತಮ್ಮಸಂಶೋಧನೆ, 'ರಾಮನ್ ಎಫೆಕ್ಟ್'ನ್ನು 'ಬೆಂಗಳೂರಿ'ನಲ್ಲಿ ಬಹಿರಂಗ ಪಡಿಸಿದ ರಾಮನ್, 1930ರಲ್ಲಿ ಅದಕ್ಕಾಗಿ 'ನೋಬೆಲ್ ಪ್ರಶಸ್ತಿ'ಗಳಿಸಿದರು.

     ಗೌರವ, ಪ್ರಶಸ್ತಿಗಳು

No comments:

Post a Comment