Friday 14 November 2014

ನೆಹರುವಿಗಿದೋ.... ನಮನಗಳು ..

ಜವಾಹರಲಾಲ್ ನೆಹರು (ನವೆಂಬರ್ 14, 1889 - ಮೇ 27, 1964) - ಭಾರತದ ಮೊದಲ ಪ್ರಧಾನ ಮಂತ್ರಿ, ಸ್ವಾತಂತ್ರ್ಯ ಹೋರಾಟಗಾರರು.ಆಗಸ್ಟ್  15, 1947ರಿಂದ ಪ್ರಾರಂಭಿಸಿ ಇವರು ಮರಣಕಾಲದವರೆಗೂ ಭಾರತದ ಪ್ರಧಾನಿಯಾಗಿದ್ದರು.
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ 1918-1937
. ರಾಜಕೀಯದಲ್ಲಿ, ಮಹಾತ್ಮ ಗಾಂಧಿಯವರ ಶಿಷ್ಯನಾದ ಇವರು, ಮೊದಲ ಬಾರಿಗೆ 1929 ರಲ್ಲಿ  ಅಧ್ಯಕ್ಷರಾಗಿ ಚುನಾಯಿತರಾದರು . ಈ ದಿನಗಳನ್ನು ಇವರು ಬಹುವಾಗಿ ಕಾರಾಗೃಹವಾಸ ದಲ್ಲಿ ಪುಸ್ತಕಗಳು, ಪತ್ರಗಳನ್ನು ಬರೆಯುತ್ತಾ ಕಾಲಕಳೆದರು ಕಳೆದರು.ಕ್ವಿಟ್ ಇಂಡಿಯ ಆಂದೋಲನದಲ್ಲಿ 1937-1947'ಭಾರತವನ್ನು ಬಿಟ್ಟು ತೊಲಗಿ' (Quit India Movement) ಭಾಗವಹಿಸಿ1942ರಲ್ಲಿ 32 ತಿಂಗಳು ಕಾರಾಗೃಹವಾಸ ಅನುಭವಿಸಿದ ಇವರು,1947 ಭಾರತದ ಮೊದಲ ಸರಕಾರವನ್ನುರಚಿಸಿದರು .

ಭಾರತದ ಮೊಟ್ಟ ಮೊದಲ ಪ್ರಧಾನಿಯಾಗಿ 1947-1964

ನೆಹರೂರವರು 18 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿದ್ದರು. ಇವರು 1964ರ ಮೇ27 ರಂದು ನಿಧನರಾದರು. ಪಂಡಿತ ಜವಹರಲಾಲ್ ನೆಹರೂರವರು ಆಗಸ್ಟ್ 14 ರ ಮಧ್ಯರಾತ್ರಿ, ಸಂಸತ್ತನ್ನುದ್ದೇಶಿಸಿ ಮಾಡಿದಭಾಷಣ  "  ಈ ನಡು ರಾತ್ರಿಯ ವಿಶೇಷ ಘಳಿಗೆಯಲ್ಲಿ, ಇಡೀ ವಿಶ್ವ ನಿದ್ರಿಸುತ್ತಿರುವಾಗ, ಭಾರತ ಸ್ವಾತಂತ್ರ್ಯವನ್ನು ಮೈದಳೆದು ಮೇಲೇಳಲಿದೆ. ಹಳತೆಲ್ಲಾ ವನ್ನು ಮರೆತು ಹೊಸತನಕ್ಕೆ ಕಾಲಿಡುವ ಮತ್ತು ಶತಮಾನಗಳಿಂದ ಶೋಷಿಸಲ್ಪಟ್ಟ ನಾಡಿನಾತ್ಮ ಧ್ವನಿದಳೆವ ಈ ಘಳಿಗೆ, ಇತಿಹಾಸದ ಅಪರೂಪದ ಮುಹೂರ್ತಗಳಲ್ಲೊಂದು. ಈ ಪವಿತ್ರ ಸಮಯದಲ್ಲಿ  ಭಾರತದ ಮತ್ತು ಭಾರತಾಂಬೆ ಯ ಸತ್ಪ್ರಜೆಗಳ ಸೇವೆಗಾಗಿ, ಹೆಚ್ಚೇನು ವಿಶ್ವದೊಳಿತಿಗಾಗಿ ನಮ್ಮದೆಲ್ಲವನ್ನು ಮುಡಿಪಿಡುವುದಾಗಿ ಮಾಡುವ ಪ್ರತಿಜ್ಞೆಅತ್ಯಂತ  ಮಹತ್ವವೆನಿಸುತ್ತದೆ ."
ಜವಾಹರಲಾಲ್‌ ನೆಹರೂ ಮೃತರಾದಾಗ ಅವರ ಪಕ್ಕದಲ್ಲಿ ಈ ಕವನದ ಸಾಲುಗಳನ್ನು ಗೀಚಿದ ಕಾಗದದ ತುಣುಕು ದೊರಕಿತ್ತು.
ಕಾನು ಸುಂದರವಾಗಿದೆ, ದಟ್ಟ ಕತ್ತಲೆಯಿಂದ ಕೂಡಿದೆ.
ಆದರೆ, ನಾನು ಮಾತುಗಳನ್ನು ಉಳಿಸಿಕೊಳ್ಳ ಬೇಕಿದೆ.
      ಮೈಲುಗಟ್ಟಲೇ ಕ್ರಮಿಸಬೇಕಿದೆ, ಮೈಲುಗಟ್ಟಲೇ ಕ್ರಮಿಸಬೇಕಿದೆ.

No comments:

Post a Comment